ಚಿಕ್ಕೋಡಿ: ಕರ್ತವ್ಯದಲ್ಲಿದ್ದಾಗ ನಡೆದ ರಸ್ತೆ ಅಪಘಾತವೊಂದರಲ್ಲಿ ಬೆಳಗಾವಿ ಮೂಲದ ಬಿಎಸ್ ಎಫ್ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ನಿವಾಸಿ ಸೂರಜ್ ಸುತಾರ್ (32) ಮೃತಪಟ್ಟ ಯೋಧ. ಅವರು ಕಳೆದ ರಾತ್ರಿ ಬಿಹಾರದ ಕಿಶನ್ ಗಂಜ್ ಸರ್ದಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಳೆದ 10 ವರ್ಷಗಳಿಂದ ಬಿಎಸ್ ಎಫ್ ಸೇವೆಯಲ್ಲಿದ್ದ ಸೂರಜ್ ಗೆ ಎರಡು ವರ್ಷಗಳ ಹಿಂದೆಯಷ್ಟೇ ಮದುವೆ ಯಾಗಿತ್ತು.
ನಾಳೆ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ಬರುವ ನಿರೀಕ್ಷೆ ಇದೆ.
ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಪಶ್ಚಿಮ ಬಂಗಾಳದಲ್ಲಿ ಕಾರ್ಯನಿರ್ವಹಿಸುತಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದ ಬಿ ಎಸ್ ಎಫ್ ಯೋಧ ಸೂರಜ ಧೋಂಡಿರಾಮ ಸುತಾರ ಅಪಘಾತದಲ್ಲಿ ಸಾವನ್ನಪ್ಪಿದ ಸುದ್ದಿ ಕೇಳಿ ಅಘಾತವಾಯಿತು. ಯೋಧನ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.