ಶೀಘ್ರದಲ್ಲೇ ಜಮ್ಮು- ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪನೆ : ಅಮಿತ್ ಷಾ

Prasthutha|

- Advertisement -

ಶ್ರೀ ನಗರ : “ವಿಧಾನಸಭಾ ಚುನಾವಣೆಗಳು ಪೂರ್ಣಗೊಂಡ ನಂತರ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪನೆ ಮಾಡಲಾಗುವುದು” ಎಂದು ಕೇಂದ್ರ ಗೃಹ ಸಚಿವ ಅಮಿತ್‌‌ ಶಾ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ಮೂರು ದಿನಗಳ ಭೇಟಿಗಾಗಿ ಶನಿವಾರ ಶ್ರೀನಗರಕ್ಕೆ ಆಗಮಿಸಿರುವ ಅವರು, ಯೂತ್‌ ಕ್ಲಬ್‌‌ನ ಸದಸ್ಯರೊಂದಿಗಿನ ಸಂವಾದದಲ್ಲಿ ಈ ಭರವಸೆ ನೀಡಿದ್ದಾರೆ. ಕಾಶ್ಮೀರದಲ್ಲಿ ಶಾಂತಿ ಹಾಗೂ ಅಭಿವೃದ್ದಿಯ ಹಾದಿಯಲ್ಲಿ ಅಡೆತಡೆಗಳನ್ನು ಸೃಷ್ಟಿಸಲು ಸರ್ಕಾರ ಯಾರಿಗೂ ಅವಕಾಶ ನೀಡುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಸರ್ಕಾರದೊಂದಿಗೆ ಕೈಜೋಡಿಸಿ” ಎಂದು ಕರೆ ನೀಡಿದ್ದಾರೆ.

- Advertisement -

“ಪ್ರಧಾನಿ ಮೋದಿ ಅವರ ಶಾಂತಿಯುತ ಹಾಗೂ ಅಭಿವೃದ್ದಿ ಹೊಂದಿದ ಕಣಿವೆ ನಿರ್ಮಾಣದ ಕನಸನ್ನು ಸಾಕಾರಗೊಳಿಸುವ ಸಲುವಾಗಿ ಕಾಶ್ಮೀರದ ಯುವಕರು ಕೈಜೋಡಿಸಬೇಕು” ಎಂದು ಮನವಿ ಮಾಡಿದ್ದಾರೆ.

Join Whatsapp