ದರ್ಶನ್ ಹಾಗೂ ಗ್ಯಾಂಗ್‌ ಬಗ್ಗೆ ನಿರ್ಲಕ್ಷ್ಯ ತೋರಿದರೆ ರಾಜ್ಯಾದ್ಯಂತ ಹೋರಾಟ: ಅಖಿಲ ಭಾರತ ವೀರಶೈವ ಮಹಾಸಭಾ

Prasthutha|

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಹೊತ್ತಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಆತನ ಗ್ಯಾಂಗ್ ಸದಸ್ಯರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ.

- Advertisement -

ಪ್ರಕರಣದ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಹಾಸಭಾ, ಪ್ರಕರಣದ ಬಗ್ಗೆ ನಿರ್ಲಕ್ಷ್ಯ ತೋರಿದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ರೇಣುಕಾಸ್ವಾಮಿ ಹತ್ಯೆಗೈದವರಿಗೆ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಲು ಮಹಾಸಭೆಯು ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿಯವರ ಹತ್ಯೆಯನ್ನು ಅಖಿಲ ಭಾರತ ವೀರಶೈವ ಮಹಾಸಭೆಯು ಉಗ್ರವಾಗಿ ಖಂಡಿಸುತ್ತದೆ. ಈ ಕೃತ್ಯವೆಸಗಿರುವವರಿಗೂ ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ ಎಲ್ಲ ವ್ಯಕ್ತಿಗಳಿಗೂ ಅತ್ಯಂತ ಶಿಕ್ಷೆಗೆ ಒಳಪಡಿಸುವಂತೆ ಮಹಾಸಭೆಯು ಸರ್ಕಾರವನ್ನು ಒತ್ತಾಯಿಸುತ್ತದೆ ಅಂತ ಪತ್ರಿಕಾ ಪ್ರಕಟಣೆಯಲ್ಲಿ ಮಹಾಸಭಾ ತಿಳಿಸಿದೆ.

Join Whatsapp