ಬ್ರಾಹ್ಮಣರ ವಿರುದ್ಧ ಹೇಳಿಕೆ ನೀಡಿದ ಹಿಂದುಳಿದ ವರ್ಗದ ನಾಯಕನನ್ನು ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

Prasthutha|

ಭೋಪಾಲ್: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ತನ್ನ ಹಿಂದುಳಿದ ವರ್ಗಗಳ ನಾಯಕನನ್ನು ಬಿಜೆಪಿ ಉಚ್ಛಾಟಿಸಿದೆ. ಗ್ವಾಲಿಯಾರ್-ಚಂಬಲ್ ವ್ಯಾಪ್ತಿಯ ಬಿಜೆಪಿ ಮುಖಂಡ ಪ್ರೀತಂ ಸಿಂಗ್ ಲೋದಿ ಪಕ್ಷದಿಂದ ಉಚ್ಛಾಟಿಸಲ್ಪಟ್ಟ ನಾಯಕ.

- Advertisement -

ಶಿವಪುರಿಯ ಕರಾಯ್‌ಯ ಶಾಲೆಯೊಂದರಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅವಂತಿ ಭಾಯ್ ಲೋದಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಪ್ರೀತಂ ಸಿಂಗ್ ಲೋದಿ, ‘ಬ್ರಾಹ್ಮಣರು ಧರ್ಮದ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿ ಮಾಡಿದ್ದಲ್ಲದೇ, ಶೋಷಣೆಯನ್ನೂ ಮಾಡುತ್ತಿದ್ದಾರೆ’ ಎಂದು ಹೇಳಿದ್ದರು.

ಭಾಷಣದ ಈ ಭಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಿಜೆಪಿ ಬೆಂಬಲಿಗರು ಪ್ರೀತಂ ಸಿಂಗ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಬಿಜೆಪಿ ಯುವ ಮುಖಂಡ ಪ್ರವೀಣ್ ಮಿಶ್ರಾ ಇದರ ವಿರುದ್ಧ ಪೊಲೀಸ್ ದೂರು ಕೂಡಾ ದಾಖಲಿಸಿದ್ದರು.

- Advertisement -

‘ಒಂದು ವರ್ಗದ ವಿರುದ್ಧ ಹೇಳಿಕೆ ನೀಡಿರುವುದು ಪಕ್ಷದ ನಿಲುವಿಗೆ ವಿರುದ್ಧವಾಗಿದ್ದು, ಇದನ್ನು ಪಕ್ಷ ಒಪ್ಪಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಭಗವಾನ್‌ದಾಸ್ ಸಬ್‌ನಾಯಿ ಹೇಳಿದ್ದಾರೆ.

Join Whatsapp