ವಲಸೆ ಕಾರ್ಮಿಕರ ವಿರುದ್ಧ ಹೇಳಿಕೆ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

Prasthutha|

ಚೆನ್ನೈ: ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಪ್ರಕರಣ ದಾಖಲಿಸಿದೆ ಎಂದು ತಿಳಿದು ಬಂದಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಪ್ರಕಾರ, ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ), 153A(1)(a) (ವಿವಿಧ ಪ್ರಾದೇಶಿಕ/ಭಾಷೆ/ಜಾತಿ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು), 505(1)(b) (ಸಾರ್ವಜನಿಕವಾಗಿ ಭಯ ಉಂಟುಮಾಡುವ ಉದ್ದೇಶ) ಮತ್ತು 505(1)(ಸಿ) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಜಾತಿಯ ಆಧಾರದ ಮೇಲೆ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

Join Whatsapp