Home ಟಾಪ್ ಸುದ್ದಿಗಳು ವಲಸೆ ಕಾರ್ಮಿಕರ ವಿರುದ್ಧ ಹೇಳಿಕೆ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ವಲಸೆ ಕಾರ್ಮಿಕರ ವಿರುದ್ಧ ಹೇಳಿಕೆ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಾಗಿದೆ.

ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಪ್ರಕರಣ ದಾಖಲಿಸಿದೆ ಎಂದು ತಿಳಿದು ಬಂದಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಪ್ರಕಾರ, ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ), 153A(1)(a) (ವಿವಿಧ ಪ್ರಾದೇಶಿಕ/ಭಾಷೆ/ಜಾತಿ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು), 505(1)(b) (ಸಾರ್ವಜನಿಕವಾಗಿ ಭಯ ಉಂಟುಮಾಡುವ ಉದ್ದೇಶ) ಮತ್ತು 505(1)(ಸಿ) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಜಾತಿಯ ಆಧಾರದ ಮೇಲೆ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

Join Whatsapp
Exit mobile version