ನವದೆಹಲಿ: ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಆರ್ ಎಸ್ ಎಸ್ ಬಗ್ಗೆ ಮಾತನಾಡಿದ್ದ ಜಾವೇದ್ ಅಖ್ತರ್ ವಿರುದ್ಧ 100 ಕೋಟಿ ರೂ. ಮಾನ ನಷ್ಟ ಮೊಕದ್ದಮೆ ದಾಖಲಾಗಿದೆ.
ಲಾಯರ್ ಸಂತೋಷ್ ದುಬೆ ಎಂಬುವವರು ಜಾವೇದ್ ಅಖ್ತರ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದವರು.
ಲೀಗಲ್ ನೋಟೀಸ್ ಸ್ವೀಕರಿಸಿದ ಏಳು ದಿನಗಳ ಒಳಗಾಗಿ ಸಾರ್ವಜನಿಕವಾಗಿ ಜಾವೇದ್ ಅಖ್ತರ್ ಕ್ಷಮೆ ಕೇಳಬೇಕು ಮತ್ತು ತಮ್ಮ ಎಲ್ಲ ಹೇಳಿಕೆಗಳನ್ನು ವಾಪಸ್ ಪಡೆಯಬೇಕು ಎಂದು ಸಂತೋಷ್ ದುಬೆ ಪಟ್ಟು ಹಿಡಿದಿದ್ದಾರೆ.
ಸೆ.4ರಂದು ಜಾವೇದ್ ಅಖ್ತರ್ ಅವರು ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಹಿಂದೂ ಸಂಘಟನೆಗಳನ್ನು ತಾಲಿಬಾನ್ ಗೆ ಹೋಲಿಸಿದ್ದನ್ನು ನಾನು ಗಮನಿಸಿದ್ದೇನೆ. ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳ ಮಾನಹಾನಿ ಮಾಡುವ ಉದ್ದೇಶದಿಂದಲೇ ಜಾವೇದ್ ಅಖ್ತರ್ ಈ ರೀತಿ ಹೇಳಿಕೆಗಳನ್ನು ನೀಡಿದ್ದಾರೆ. ಆರ್ ಎಸ್ ಎಸ್ ಈ ಸಮಾಜದಲ್ಲಿ ಕ್ಯಾನ್ಸರ್ ಇದ್ದಂತೆ ಎಂದು ಅವರು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಕೆಲಸ. ಆರ್ ಎಸ್ ಎಸ್ ಗೆ ಸೇರುವವರನ್ನು ದಾರಿ ತಪ್ಪಿಸಲು ಇಂಥ ಹೇಳಿಕೆ ನೀಡಲಾಗಿದೆ’ ಎಂದು ದೂರಿನಲ್ಲಿ ಜೋಶಿ ಆರೋಪಿಸಿದ್ದಾರೆ.
ಪ್ರಧಾನಮಂತ್ರಿ, ರಾಷ್ಟ್ರಪತಿ ಮತ್ತು ಕೇಂದ್ರದ ಅನೇಕ ಮಂತ್ರಿಗಳು ಆರ್ ಎಸ್ ಎಸ್ ಬೆಂಬಲಿಗರಾಗಿದ್ದಾರೆ. ಅಂಥ ಸಂಘಟನೆ ಬಗ್ಗೆ ಜಾವೇದ್ ಅಖ್ತರ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೃಷ್ಟಿಮಾನ್ ಜೋಶಿ ಹೇಳಿದ್ದಾರೆ. ಅ.30ರಂದು ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.