Home ಟಾಪ್ ಸುದ್ದಿಗಳು ರಸಗೊಬ್ಬರ ವಿಚಾರದಲ್ಲಿ ಇಬ್ಬರು ಸಚಿವರ ತದ್ವಿರುದ್ಧ ಹೇಳಿಕೆ; ಗೊಂದಲಕ್ಕೀಡಾದ ಜನಸಾಮಾನ್ಯರು

ರಸಗೊಬ್ಬರ ವಿಚಾರದಲ್ಲಿ ಇಬ್ಬರು ಸಚಿವರ ತದ್ವಿರುದ್ಧ ಹೇಳಿಕೆ; ಗೊಂದಲಕ್ಕೀಡಾದ ಜನಸಾಮಾನ್ಯರು

ಬೆಂಗಳೂರು: ರಷ್ಯಾ ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಉಂಟಾಗಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರೆ, ಇದಕ್ಕೆ ತದ್ವಿರುದ್ಧವಾಗಿ ರಾಜ್ಯದ ಕೃಷಿ ಸಚಿವರು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ರಾಜ್ಯದಲ್ಲಿ ರಸಗೊಬ್ಬರ ಕೊರತೆ ಉಂಟಾಗಿರುವುದು ನಿಜ. ಅದನ್ನು ಹಂತ ಹಂತವಾಗಿ ಬಗೆಹರಿಸುತ್ತೇವೆ. ಮುಂದಿನ ದಿನಗಳಲ್ಲಿ ಭಾರತದಲ್ಲೇ ರಸಗೊಬ್ಬರದ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿರುವ ಕೃಷಿ ಸಚಿವ ಬಿ. ಸಿ. ಪಾಟೀಲ್,  ರಾಜ್ಯದಲ್ಲಿ ರಸಗೊಬ್ಬರದ ಕೊರತೆಯಿಲ್ಲ. ಕೃತಕ ಅಭಾವವನ್ನುಂಟುಮಾಡಿದರೆ ಅಂತಹ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳಸಂತೆಕೋರರ ಪತ್ತೆಗೆ ವಿಶೇಷ ತಂಡ ರಚಿಸಲಾಗುವುದು ಎಂದು ಹೇಳಿದರು.

ಇಬ್ಬರು ಸಚಿವರ ಹೇಳಿಕೆಯಿಂದ ಜನಸಾಮಾನ್ಯರು ಗೊಂದಲಕ್ಕೀಡಾಗಿದ್ದಾರೆ. ರೈತರು, ಯಾರ ಮಾತನ್ನು ನಂಬಬೇಕು ಎಂಬ ಗೊಂದಲದಲ್ಲಿದ್ದಾರೆ.

Join Whatsapp
Exit mobile version