ಪೇಜಾವರ ಶ್ರೀಗಳ ಬಗ್ಗೆ ಹೇಳಿಕೆ: ಹಂಸಲೇಖ ವಿರುದ್ಧ ದೂರು ದಾಖಲು

Prasthutha|

ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕೃಷ್ಣರಾಜ್ ಎಂಬುವರು ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

ಹಂಸಲೇಖ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಶ್ರೀಗಳು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಲೇವಡಿ ಮಾಡಿದ್ದಾರೆ ಎಂದು ಆಪಾದಿಸಿ ದೂರು ನೀಡಿದ್ದಾರೆ.

ಮೈಸೂರಿನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಹಂಸಲೇಖ, ಪೇಜಾವರ ಶ್ರೀಗಳು ದಲಿತರ ಮನೆ ಪ್ರವೇಶಿಸಿದ್ದಾರೆ ಎಂದು ಸ್ಟೇಟ್ ಮೆಂಟ್ ಇದೆ, ಆದರೆ ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಮನೆಯವರು ಕೋಳಿ ಕೊಟ್ಟರೆ ತಿನ್ನೋಕೆ ಸಾಧ್ಯವೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿನ್ನುತ್ತಾರಾ..? ಲಿವರ್ ಫ್ರೈ ತಿಂತಾರಾ, ಆಗುತ್ತಾ..? ಎಂದು ಪ್ರಶ್ನಿಸಿದ್ದರು. ಇದಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಹಂಸಲೇಖ ಕ್ಷಮೆ ಕೋರಿದ್ದರು.

Join Whatsapp