Home ಟಾಪ್ ಸುದ್ದಿಗಳು ಮುರುಘಾ ಶ್ರೀ ಪೋಕ್ಸೋ ಕೇಸ್: ನ್ಯಾಯಾಧೀಶರ ಮುಂದೆ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲು

ಮುರುಘಾ ಶ್ರೀ ಪೋಕ್ಸೋ ಕೇಸ್: ನ್ಯಾಯಾಧೀಶರ ಮುಂದೆ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲು

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಎದುರು ಬಾಲಕಿಯರ ಸಿಆರ್ ಪಿಸಿ 164ರ ಅನ್ವಯ ಹೇಳಿಕೆ ದಾಖಲಿಸಲಾಗಿದೆ.


ಮುರುಘಾ ಶರಣರು ತನ್ನಿಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮುರುಘಾ ಮಠದಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ದೂರು ನೀಡಿದ್ದರು.

ಆ ದೂರಿನ ಆಧಾರದಲ್ಲಿ ಮಂಗಳವಾರ ಸಂತ್ರಸ್ತ ಬಾಲಕಿಯರನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಧೀಶರ ಮುಂದೆ ಬಾಲಕಿಯರ ಹೇಳಿಕೆಗಳನ್ನು ದಾಖಲಿಸಲಾಗಿದೆ.

Join Whatsapp
Exit mobile version