ಫೆಬ್ರವರಿ 27 ಮತ್ತು ಮಾರ್ಚ್ 2 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ

Prasthutha|

ಬೆಂಗಳೂರು: ರಾಜ್ಯಾದ್ಯಂತ ಫೆಬ್ರವರಿ 27 ಮತ್ತು ಮಾರ್ಚ್ 2 ರಂದು ರಾಷ್ಟ್ರೀಯ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನದಡಿ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ರಮವನ್ನು ಆಯೋಜಿಸಿದೆ.

- Advertisement -

ಆರೋಗ್ಯ ಇಲಾಖೆಯ ನಿರ್ದೇಶನದ ಮೇರೆಗೆ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ಪಂಚಾಯಿತಿ ಮಟ್ಟದಲ್ಲೂ ಎರಡು ಹಂತದಲ್ಲಿ ಪಲ್ಸ್ ಪೊಲೀಯೋ ಲಸಿಕೆಯನ್ನು ವಿತರಿಸಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಫೆಬ್ರವರಿ 27 ರಂದು ಮತ್ತು ಮಾರ್ಚ್ 2 ರಂದು ಬಸ್ ನಿಲ್ದಾಣ, ರೈಲು ಮತ್ತು ವಿಮಾನ ನಿಲ್ದಾಣಗಳೂ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕಲಿದ್ದಾರೆ.

- Advertisement -

ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪೂರ್ವಭಾವಿ ಸಭೆ ನಡೆಸಿ, ಐದು ವರ್ಷದೊಳಗಿನ ಮಕ್ಕಳಿಗೆ ಇದೇ 27 ರಂದು ಜಿಲ್ಲಾ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಜೊತೆಗೆ ಪ್ರಮುಖ ಬೀದಿಗಳಲ್ಲಿಯೂ ಲಸಿಕೆ ಹಾಕಲಾಗುವುದು. ನಂತರ ಮನೆ-ಮನೆಗೆ ಆರೋಗ್ಯ ಕಾರ್ಯಕರ್ತೆಯರು ತೆರಳಿ ಲಸಿಕೆ ಹಾಕುವ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಿದರು ಎಂದು ಜಿಲ್ಲೆಗಳಿಂದ ವರದಿಯಾಗಿವೆ.



Join Whatsapp