ಮತಾಂತರ ನಿಷೇಧ ಮಸೂದೆಯನ್ನು ಹಿಂಪಡೆಯಲು ಒತ್ತಾಯಿಸಿ SDPI ನಿಂದ ರಾಜ್ಯಾದ್ಯಂತ ಪ್ರತಿಭಟನೆ

Prasthutha|

ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಜನವಿರೋಧಿ ಮತಾಂತರ ನಿಷೇಧ ಮಸೂದೆಯ ವಿರುದ್ಧ ಎಸ್.ಡಿ.ಪಿ.ಐ ವತಿಯಿಂದ ಕೋಲಾರ, ಗುಲ್ಬರ್ಗಾ, ಶಿವಮೊಗ್ಗ, ಹುಬ್ಬಳ್ಳಿ, ಬೆಂಗಳೂರು, ಮೈಸೂರು , ಮಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

- Advertisement -

ರಾಜ್ಯ ಸರ್ಕಾರವು ವಿಧಾನ ಸಭಾ ಅಧಿವೇಶನದಲ್ಲಿ ಅಭಿವೃದ್ಧಿಯ ಬಗ್ಗೆ ಚರ್ಚಿಸದೆ ಧರ್ಮಗಳ ಬಗ್ಗೆ ಒಡಕನ್ನು ಉಂಟುಮಾಡುವ ಸಂವಿಧಾನ ವಿರೋಧಿಯಾದ ಕಾನೂನುಗಳನ್ನು ಜಾರಿ ಮಾಡುತ್ತಿದೆ. ಬಲವಂತದ ಮತಾಂತರದ ಪ್ರಕರಣಗಳು ರಾಜ್ಯದ ಯಾವುದೇ ಪ್ರದೇಶದಲ್ಲೂ ನಡೆಯದಿದ್ದರೂ ನಿರ್ದಿಷ್ಟ ಸಮುದಾಯವನ್ನು ಗುರಿಪಡಿಸುವ ದುರುದ್ದೇಶದಿಂದ ಮತಾಂತರ ನಿಷೇಧ ಮಸೂದೆಯನ್ನು ತರಲಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯ ಕೊನೆಯಲ್ಲಿ ಸಂವಿಧಾನ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಯ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಲಾಯಿತು.

Join Whatsapp