ಸಿದ್ದರಾಮಯ್ಯನವರನ್ನ ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆ

Prasthutha|

- Advertisement -

ಹುಬ್ಬಳ್ಳಿ: ಒಕ್ಕಲಿಗ ಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಮಾತು ಜೋರಾಗಿದೆ. ಇದರೊಂದಿಗೆ ಲಿಂಗಾಯತ ಮತ್ತು ಒಕ್ಕಲಿಗ ಸ್ವಾಮೀಜಿಗಳು ತಮ್ಮ ತಮ್ಮ ಸಮುದಾಯದ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಈಗ ಅಹಿಂದ ಅಖಾಡಕ್ಕೆ ಇಳಿದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಿಸಲು ಅಹಿಂದ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. 5 ವರ್ಷ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರಬೇಕು. ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು. ಕೆಲವು ಸ್ವಾಮೀಜಿಗಳು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಇಂತಹ ಹೇಳಿಕೆಗಳು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತರುತ್ತೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು‌ ಎಂದು ಆಗ್ರಹಿಸಿದರು.

Join Whatsapp