ಉತ್ತರ ಪ್ರದೇಶ : ಅಂಬೇಡ್ಕರ್‌ ಪ್ರತಿಮೆಗೆ ಅವಮಾನ; ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ

Prasthutha|

ಬಲಿಯಾ : ಉತ್ತರ ಪ್ರದೇಶದ ಬಲಿಯಾ ಸಮೀಪದ ರಾಂಪುರ ಅಸ್ಲಿ ಗ್ರಾಮದಲ್ಲಿ ಡಾ. ಬಿ.ಆರ್.‌ ಅಂಬೇಡ್ಕರ್‌ ಪ್ರತಿಮೆಯೊಂದನ್ನು ವಿರೂಪಗೊಳಿಸಲಾದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿ ಮಂಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.

- Advertisement -

ಅಪರಿಚಿತ ವ್ಯಕ್ತಿಗಳು ಸೋಮವಾರ ರಾತ್ರಿ ಈ ಕೃತ್ಯ ಎಸಗಿದ್ದಾರೆ ಎಂದು ಪ್ರತಿಭಟನಕಾರರು ಆಪಾದಿಸಿದ್ದಾರೆ.

ಘಟನೆಗ ಆಕ್ರೋಶ ವ್ಯಕ್ತಪಡಿಸಿ ಸ್ಥಳೀಯರು ಗದ್ವಾರ್-ನಾಗ್ರಾ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಕಾರರ ಮನವೊಲಿಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಪೊಲೀಸ್‌ ವರಿಷ್ಠಾಧಿಕಾರಿ ಸಂಜಯ್‌ ಯಾದವ್‌ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Join Whatsapp