Home ಟಾಪ್ ಸುದ್ದಿಗಳು ಉತ್ತರ ಪ್ರದೇಶ : ಅಂಬೇಡ್ಕರ್‌ ಪ್ರತಿಮೆಗೆ ಅವಮಾನ; ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ

ಉತ್ತರ ಪ್ರದೇಶ : ಅಂಬೇಡ್ಕರ್‌ ಪ್ರತಿಮೆಗೆ ಅವಮಾನ; ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ

ಬಲಿಯಾ : ಉತ್ತರ ಪ್ರದೇಶದ ಬಲಿಯಾ ಸಮೀಪದ ರಾಂಪುರ ಅಸ್ಲಿ ಗ್ರಾಮದಲ್ಲಿ ಡಾ. ಬಿ.ಆರ್.‌ ಅಂಬೇಡ್ಕರ್‌ ಪ್ರತಿಮೆಯೊಂದನ್ನು ವಿರೂಪಗೊಳಿಸಲಾದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿ ಮಂಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಅಪರಿಚಿತ ವ್ಯಕ್ತಿಗಳು ಸೋಮವಾರ ರಾತ್ರಿ ಈ ಕೃತ್ಯ ಎಸಗಿದ್ದಾರೆ ಎಂದು ಪ್ರತಿಭಟನಕಾರರು ಆಪಾದಿಸಿದ್ದಾರೆ.

ಘಟನೆಗ ಆಕ್ರೋಶ ವ್ಯಕ್ತಪಡಿಸಿ ಸ್ಥಳೀಯರು ಗದ್ವಾರ್-ನಾಗ್ರಾ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಕಾರರ ಮನವೊಲಿಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಪೊಲೀಸ್‌ ವರಿಷ್ಠಾಧಿಕಾರಿ ಸಂಜಯ್‌ ಯಾದವ್‌ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version