Home ಟಾಪ್ ಸುದ್ದಿಗಳು ಬರ ಪರಿಹಾರ; ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ: ಕೃಷ್ಣ ಬೈರೇಗೌಡ

ಬರ ಪರಿಹಾರ; ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ: ಕೃಷ್ಣ ಬೈರೇಗೌಡ

ಬೆಂಗಳೂರು: ನಾವು 18,000 ಕೋಟಿಗೆ ಮನವಿ ಸಲ್ಲಿಸಿದ್ದೆವು. ಸಮಸ್ಯೆ ಗಂಭೀರವಾಗಿರುವ ಆಧಾರದ ಮೇಲೆ ಪರಿಹಾರ ಕೇಳಿದ್ದೆವು. ಈಗ 3,400 ಕೋಟಿಯಷ್ಟು ಹಣ ಕೊಟ್ಟಿದ್ದಾರೆ. ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.


ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಕೇಂದ್ರ ಸರ್ಕಾರದ ಜೊತೆ ಮಾತುಕತೆ ಮಾಡಿದ್ದೇವೆ. ಆದರೆ ಯಾವುದೇ ಅಧಿಕೃತ ದೃಢೀಕರಣ ಆಗಿಲ್ಲ. ನಾವು ಅಧಿಕೃತ ಆದೇಶದ ನೀರಿಕ್ಷೇಯಲ್ಲಿದ್ದೇವೆ ಎಂದರು.

Join Whatsapp
Exit mobile version