ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ: ಸಚಿವ ಕೃಷ್ಣ ಬೈರೇಗೌಡ

Prasthutha|

ಕಲಬುರಗಿ: ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

- Advertisement -


ನಗರದಲ್ಲಿ ವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.


ಸರ್ವೆ ಕೆಲಸಗಳು ವಿಳಂಬವಾಗುವುದನ್ನು ತಪ್ಪಿಸಲು ಸರ್ವೆಯರ್ಗಳ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದರು.

- Advertisement -


‘ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ. ಹಾಗಾಗಿ ಕಂದಾಯ ಇಲಾಖೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಎಲ್ಲೆಲ್ಲಿ ಅತಿವೃಷ್ಟಿ ಆಗುತ್ತದೆ, ಅಲ್ಲಿ ಎಚ್ಚರಿಕೆ ವಹಿಸಬೇಕು. ಪ್ರಾಣಹಾನಿ, ಜಾನುವಾರು ಹಾನಿ ತಪ್ಪಿಸಲು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು’ ಎಂದು ಹೇಳಿದರು.

Join Whatsapp
Exit mobile version