ಕೇರಳ ಗಡಿಭಾಗದ ಅಲ್ಪಸಂಖ್ಯಾತರ ಯೋಗಕ್ಷೇಮಕ್ಕೆ ಸೂಕ್ತ ಕ್ರಮ: ಡಾ.ಸಿ.ಸೋಮಶೇಖರ್

Prasthutha|

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ ಅವರ ಅಧ್ಯಕ್ಷ ಅವಧಿಯ ಎರಡು ವರ್ಷಗಳ ಪ್ರಾಧಿಕಾರದ ಸಾಧನೆಯ “ಸಾಧನಾ ದರ್ಶನ ” ಕಿರು ಹೊತ್ತಿಗೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನಿವಾಸದಲ್ಲಿ ಬಿಡುಗಡೆ ಮಾಡಿದರು.

- Advertisement -

ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಉಪಸ್ಥಿತರಿದ್ದರು.

ಬಳಿಕ ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಗಡಿ ಜೆಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಮಾಡಿ ಚರ್ಚೆ ನಡೆಸಿದ್ದೇನೆ. ಪ್ರತಿ ತಿಂಗಳು ಗಡಿ ಭಾಗದ ಹಳ್ಳಿಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಬೇಕೆಂದು ಸೂಚನೆ ನೀಡಿದ್ದೇನೆ. ಕೇರಳ ಗಡಿಭಾಗದ ಅಲ್ಪಸಂಖ್ಯಾತರ ಯೋಗಕ್ಷೇಮಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಕೈಯ್ಯಾರ ಕಿಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

- Advertisement -

ಗಡಿ ಭಾಗದ ಪರಿಶಿಷ್ಟ ಜಾತಿ, ಪಂಗಡದದವರ ಕಲ್ಯಾಣಕ್ಕಾಗಿ ಪ್ರತ್ಯೇಕ ಅನುದಾನವನ್ನು ಪ್ರಾಧಿಕಾರದ ವತಿಯಿಂದ ತೆಗೆದಿರಿಸಲಾಗಿದೆ. ಎಂಟು ಭಾಗದ ವಿಶ್ವವಿದ್ಯಾಲಯ ಮೂಲಕ ಗಡಿ ಭಾಗದ ಜನರ ಸಮಗ್ರ ಅಧ್ಯಯನಕ್ಕೆ ಮೂರುನಾಲ್ಕು ಸುತ್ತು ಸಭೆ ನಡೆಸಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ ಸಾಂಸ್ಕೃತಿಕ ನಿಧಿ ಸ್ಥಾಪಿಸುವಂತೆ ಕನಿಷ್ಠ ಐದು ಲಕ್ಷ ರೂಪಾಯಿ ಇಡುವಂತೆ ಪತ್ರ ಬರೆಯಲಾಗಿದೆ. 4 ರಂಗಾಯಣಗಳಿಗೆ ಗಡಿ ಭಾಗದ ಕಲೆಯನ್ನು ಪ್ರದರ್ಶಿಸುವಂತೆ ಕ್ರಮ ಕೈಗೊಳ್ಳಲಾಗಿದೆ. ಆಕಾಶವಾಣಿ ಮೂಲಕ ಅವರ ಕಲೆಯನ್ನು ಪ್ರದರ್ಶನ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಗೋವಾ, ಅಕ್ಕಲಕೋಟೆ, ಕಾಸರಗೋಡಿನಲ್ಲಿ ಕನ್ನಡ ಭವನ ಕಟ್ಟಲು ಮುಖ್ಯಮಂತ್ರಿಗಳು ಈಗಾಗಲೇ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ಪ್ರಾರಂಭಿಕವಾಗಿ ಇವುಗಳಿಗೆ ಐದು ಲಕ್ಷ ರೂಪಾಯಿ ಅನುದಾನ ನೀಡಲಾಗಿದೆ. ಗಡಿ ಭಾಗದ ಪ್ರಾಥಮಿಕ ಶಾಲೆಗಳಲ್ಲಿ ಒದುತ್ತಿರುವ ಮಕ್ಕಳ ಹೆಸರಿನಲ್ಲಿ ಐದು ಸಾವಿರ ರೂಪಾಯಿ ನಿಧಿ ಇಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಜತ್ತ, ಅಕ್ಕಲಕೋಟೆಯಲ್ಲಿ ಶಿಕ್ಷಣ, ಕನ್ನಡದ ಅಭಿವೃದ್ಧಿಗಾಗಿ ಪ್ರಾಧಿಕಾರದ ವತಿಯಿಂದ ಹೆಚ್ಚಿನ ಅನುದಾನವನ್ನು ಒದಗಿಸಲಾಗುತ್ತದೆ. ಇಲ್ಲಿ ಪ್ರಾಥಮಿಕ ಶಿಕ್ಷಣಕ್ಕಾಗಿ ಹೆಚ್ಚಿನ ಅನುದಾನವನ್ನು ನೀಡುವುದಿಲ್ಲ. ಈ ಕಾರಣಕ್ಕಾಗಿ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದು ತಿಳಿಸಿದರು

ಮರಾಠ ಶಾಲೆಗಳ ಸ್ಥಾಪನೆಗೆ ಮಹಾರಾಷ್ಟ್ರ ಸರ್ಕಾರ ಕ್ರಮ ಕೈಗೊಂಡಿತ್ತು. ಆದರೆ ನಾವು ನಮ್ಮ ಪ್ರಾಧಿಕಾರದ ವತಿಯಿಂದ ಇದನ್ನು ಕಟ್ಟುವಾಗಿ ವಿರೋಧಿಸಿ ಅವುಗಳನ್ನು ಸ್ಥಗಿತಗೊಳಿಸುವಂತೆ ಕ್ರಮ ಕೈಗೊಂಡಿದ್ದೇವೆ. ಗಡಿಭಾಗದಲ್ಲಿ ಕನ್ನಡ ಅಭಿವೃದ್ಧಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರ ಸಂಕಿರಣ ಆಯೋಜನೆಗೆ ಒಂದು ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತದೆ ಎಂದು ಹೇಳಿದರು.



Join Whatsapp