ಬೆಳಗಾವಿ: ಪಾಟೀಲ ಗಲ್ಲಿಯಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನಡೆದ ಬಳಿಕ ಯುವಕರ ಗುಂಪೊಂದು ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಮೆರವಣಿಗೆ ಹೊರಟಿತ್ತು, ಈ ಗುಂಪಿನ ಮೇಲೆ ಮತ್ತೊಂದು ಗುಂಪಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಅಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರಿಂದ ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.