ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ.
ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ದೂರು ನೀಡಿತ್ತು.