ಕಲ್ಲಿನ ಕ್ವಾರಿ ಕುಸಿತ: 10 ಸಾವು, ಹಲವರು ನಾಪತ್ತೆ

Prasthutha|

ಐಜ್ವಾಲ್: ಮಿಜೋರಾಂ ರಾಜ್ಯದ ರಾಜಧಾನಿ ಐಜ್ವಾಲ್ ನಲ್ಲಿ ಮಂಗಳವಾರ ಬೆಳಿಗ್ಗೆ ಕಲ್ಲಿನ ಕ್ವಾರಿ ಕುಸಿದು 10 ಜನ ಸಾವನ್ನಪ್ಪಿದ್ದು ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ನಿರಂತರ ಮಳೆಯ ಪರಿಣಾಮ ಈ ಕ್ವಾರಿ ಕುಸಿದಿದೆ ಎಂದು ಪೊಲೀಸರು ಹೇಳಿದ್ದಾರೆ. ನಗರದ ದಕ್ಷಿಣ ಹೊರವಲಯದಲ್ಲಿರುವ ಮೆಲ್ಥಮ್ ಪ್ರದೇಶದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 10 ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Join Whatsapp