JNUನಲ್ಲಿ ಮೋದಿ ಕುರಿತ ಸಾಕ್ಷ್ಯಚಿತ್ರ ವೀಕ್ಷಿಸುವ ವೇಳೆ ವಿದ್ಯುತ್ ಕಡಿತಗೊಳಿಸಿದ ಆಡಳಿತ ಮಂಡಳಿ

Prasthutha|

►ಸಾಕ್ಷ್ಯಚಿತ್ರ ವೀಕ್ಷಣೆ ಮಾಡುತ್ತಿದ್ದವರ ಮೇಲೆ ಕಲ್ಲು ತೂರಾಟ

- Advertisement -

ಹೊಸದಿಲ್ಲಿ: ಬಿಬಿಸಿ ಸುದ್ದಿ ಸಂಸ್ಥೆ ಬಿಡುಗಡೆಗೊಳಿಸಿದ್ದ ಪ್ರಧಾನಿ ಮೋದಿ ಕುರಿತ ಸಾಕ್ಷ್ಯಚಿತ್ರವನ್ನು ದೆಹಲಿಯ ಜೆಎನ್​ಯುನಲ್ಲಿ ಪ್ರದರ್ಶನ ಮಾಡಲಾಗಿದ್ದು, ಆಡಳಿತ ಮಂಡಳಿ ವಿದ್ಯುತ್ ಕಡಿತಗೊಳಿಸಿದೆ.

ಸಾಕ್ಷ್ಯಚಿತ್ರ ವೀಕ್ಷಣೆ ಮಾಡುತ್ತಿದ್ದವರ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ವರದಿಯಾಗಿದೆ.

- Advertisement -

ಈ ನಡುವೆಯೂ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದಾರೆ.

ಹೈದರಾಬಾದ್ ವಿವಿ ಕ್ಯಾಂಪಸ್ ನಲ್ಲಿ ಜನವರಿ 23ರಂದು ಸಾಕ್ಷ್ಯಚಿತ್ರ ಪ್ರದರ್ಶಿಸಲಾಗಿದೆ. ಇದರ ಬೆನ್ನಲ್ಲೇ ಮಂಗಳವಾರ (ಜ.24)ರಾತ್ರಿ ತನ್ನ ಕಚೇರಿಯಲ್ಲಿ ಸಾಕ್ಷ್ಯಚಿತ್ರ ಪ್ರದರ್ಶಿಸುವುದಾಗಿ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ (ಜೆಎನ್ ಯುಎಸ್ ಯು) ತಿಳಿಸಿತ್ತು. ಈ ಸಂಬಂಧ ಸೋಮವಾರ ಭಿತ್ತಿಪತ್ರ ಹಂಚಲಾಗಿತ್ತು. ಅದರಂತೆ ಮಂಗಳವಾರ ರಾತ್ರಿ JNUನಲ್ಲಿ ಪ್ರಧಾನಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಗಿದ್ದು, ವೀಕ್ಷಣೆ ಮಾಡುತ್ತಿದ್ದವರ ಮೇಲೆ ಗುಂಪೊಂದು ಕಲ್ಲು ತೂರಿದೆ ಎನ್ನಲಾಗಿದೆ.

Join Whatsapp