Home ಟಾಪ್ ಸುದ್ದಿಗಳು ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹ ನಿಲ್ಲಿಸಿ: ಅಮಿತ್ ಶಾಗೆ ಸ್ಟಾಲಿನ್ ಪತ್ರ

ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹ ನಿಲ್ಲಿಸಿ: ಅಮಿತ್ ಶಾಗೆ ಸ್ಟಾಲಿನ್ ಪತ್ರ

ಚೆನೈ: ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸ್ಟಾಲಿನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.


ಅಮುಲ್ ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸುವುದು ದುರದೃಷ್ಟಕರ ವಿಚಾರವಾಗಿದೆ. ಇದು ಆವಿನ್ ಹಿತಾಸಕ್ತಿಗೆ ಹಾನಿಕರ ಮತ್ತು ಸಹಕಾರಿ ಸಂಸ್ಥೆಗಳ ನಡುವೆ ಅನಗತ್ಯ ಪೈಪೋಟಿಗೆ ಕಾರಣವಾಗಿದೆ. ಇದು ಉತ್ತಮವಾದ ಬೆಳವಣಿಗೆಯಲ್ಲ. ಪ್ರಾದೇಶಿಕ ಸಹಕಾರಿ ಸಂಸ್ಥೆಗಳು ರಾಜ್ಯಗಳಲ್ಲಿ ಡೈರಿ ಅಭಿವೃದ್ಧಿಯ ಆಧಾರವಾಗಿದೆ. ಅಮುಲ್ ಹಸ್ತಕ್ಷೇಪದಿಂದ ಸಹಕಾರಿ ಸಂಸ್ಥೆಗಳ ಬುಡಕ್ಕೆ ಹೊಡೆತ ಬೀಳುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Join Whatsapp
Exit mobile version