Home ಟಾಪ್ ಸುದ್ದಿಗಳು ಹಿಜಾಬ್ ವಿಚಾರದಲ್ಲಿ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ: ಪ್ರಿಯಾಂಕಾ ಗಾಂಧಿ

ಹಿಜಾಬ್ ವಿಚಾರದಲ್ಲಿ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ: ಪ್ರಿಯಾಂಕಾ ಗಾಂಧಿ

ನವದೆಹಲಿ: ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಮುಸ್ಲಿಮ್ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸುವಂತೆ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ಅವರು ಸರ್ಕಾರ ಆಗ್ರಹಿಸಿದ್ದಾರೆ.

ಸದ್ಯ ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, ಆಕೆಯ ವಸ್ತ್ರವು ಬಿಕಿನಿ ಆಗಿರಲಿ, ಘೂಂಘಾಟ್ ಆಗಿರಲಿ ಜೀನ್ಸ್ ಅಥವಾ ಹಿಜಾಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವ ಹಕ್ಕು ಮಹಿಳೆಗೆ ಇದೆ. ಈ ಹಕ್ಕನ್ನು ಸಂವಿಧಾನ ಖಾತರಿಪಡಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವಿಟ್ಟರ್ ನ ‘ಲಡ್ಕಿ ಹೂ ಲಡ್ ಸಕ್ತಾ ಹೂ’ ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ತಿಳಿಸಿದ್ದಾರೆ.

ಈ ಮಧ್ಯೆ ಕರ್ನಾಟಕದಲ್ಲಿ ಹಿಜಾಬ್ – ಕೇಸರಿ ಶಾಲು ಸಂಘರ್ಷ ತಾರತಕ್ಕೇರಿದ್ದು, ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇಂದು ತೀರ್ಪು ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Join Whatsapp
Exit mobile version