Home ಟಾಪ್ ಸುದ್ದಿಗಳು ‘ಬೂಟ್ ನೆಕ್ಕುವುದನ್ನು ನಿಲ್ಲಿಸಿ’: ರಶ್ಮಿಕಾ ಮಂದಣ್ಣಗೆ ಅಂಜಲಿ ನಿಂಬಾಳ್ಕರ್ ತಿರುಗೇಟು

‘ಬೂಟ್ ನೆಕ್ಕುವುದನ್ನು ನಿಲ್ಲಿಸಿ’: ರಶ್ಮಿಕಾ ಮಂದಣ್ಣಗೆ ಅಂಜಲಿ ನಿಂಬಾಳ್ಕರ್ ತಿರುಗೇಟು

ಬೆಂಗಳೂರು: ಮೂಲಭೂತ ಸೌಕರ್ಯ ಕ್ಷೇತ್ರದಲ್ಲಿ ಮೋದಿ ಸರ್ಕಾರದ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ತಿರುಗೇಟು ನೀಡಿದ್ದಾರೆ.

ಬುಲೆಟ್ ರೈಲಿನ ಬಗ್ಗೆ ಏನಾದರೂ ಹೇಳಲು ಇದ್ಯಾ ಎಂದು ಪ್ರಶ್ನಿಸಿರುವ ಅಂಜಲಿ ನಿಂಬಾಳ್ಕರ್ , ಮುಂಬೈ – ಅಹಮದಾಬಾದ್ ಬುಲೆಟ್ ರೈಲು ಯೋಜನೆ ದುರಂತ. ಬೂಟ್ ನೆಕ್ಕುವುದನ್ನು ನಿಲ್ಲಿಸಿ. ಮೆಗಾಸ್ಟಾರ್ ಮಾಡಲು ಇದು ನಿಮಗೆ ಸಹಾಯ ಮಾಡುವುದಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.

ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು. ಈಗ ಅದು 20 ನಿಮಿಷಗಳಿಗೆ ಇಳಿದಿದೆ. ಯೋಚಿಸಿದರೆ ಅಸಾಧ್ಯ ಎನಿಸುತ್ತದೆ. ಅದನ್ನು ಸಾಧಿಸಿ ತೋರಿಸಿದ್ದಾರೆ. ಗೋವಾದಿಂದ ಮುಂಬೈಗೆ, ಬೆಂಗಳೂರಿನಿಂದ ಮುಂಬೈ ರಸ್ತೆ ಹಾಗೂ ಇನ್ನಿತರೆ ಮೂಲಸೌಕರ್ಯಗಳು ಅಭಿವೃದ್ಧಿಯಾಗುತ್ತಿರುವ ರೀತಿ ನೋಡಿದರೆ ಹೆಮ್ಮೆ ಎನಿಸುತ್ತದೆ ಎಂದು ನಟಿ ಮಾತನಾಡಿದ್ದರು. ಭಾರತ ಈಗ ವೇಗವಾಗಿ ಸಾಗುತ್ತಿದೆ. ಎಲ್ಲೂ ನಿಲ್ಲುತ್ತಿಲ್ಲ. ಕಳೆದ 10 ವರ್ಷಗಳಲ್ಲಿ ಭಾರತ ಅದ್ಭುತವಾದ ಅಭಿವೃದ್ಧಿಯನ್ನು ಸಾಧಿಸಿದೆ. ಪ್ರಗತಿ ಎಂಬುದು ಬಹಳ ವೇಗವಾಗಿ ಆಗುತ್ತಿದೆ. ಈ ಅಟಲ್ ಸೇತು ಕೇವಲ ಏಳು ವರ್ಷಗಳಲ್ಲಿ ಮುಗಿದಿದೆಯಂತೆ. ಹೊಸ ಭಾರತ ಉದಯವಾಗುತ್ತಿದೆ. ಭಾರತ ವಿಶ್ವದ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ. ಭಾರತದ ಯುವಕರು ಜವಾಬ್ದಾರಿಯುತವಾಗಿ ಮತ ಹಾಕಬೇಕು. ನಮ್ಮ ದೇಶ ಸಾಧಿಸುತ್ತಿರುವ ಪ್ರಗತಿ ನಿಲ್ಲಬಾರದು. ಹಾಗಾಗಿ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಬೇಕು ಎಂದು ನಟಿ ಮಾತನಾಡಿದ್ದರು. ರಶ್ಮಿಕಾ ಮಂದಣ್ಣ ಟ್ವೀಟ್ ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರತಿಕ್ರಿಯಿಸಿ ಮೆಚ್ಚುಗೆ ವ್ಯಕ್ತ ಪಡಿಸಿದ್ದರು.

Join Whatsapp
Exit mobile version