ರಸ್ತೆ ಸಮಸ್ಯೆ ಬಿಟ್ಟು ಲವ್ ಜಿಹಾದ್ ಬಗ್ಗೆ ಯೋಚನೆ ಮಾಡಿ: ಸಂಸದ ನಳೀನ್ ಕುಮಾರ್ ಕಟೀಲ್

Prasthutha|

ಮಂಗಳೂರು: ರಸ್ತೆ ಸಮಸ್ಯೆಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ನಿಮ್ಮ ಮಕ್ಕಳ ಭವಿಷ್ಯದ ಕುರಿತು ಯೋಚಿಸಿ ಲವ್ ಜಿಹಾದ್’ನಿಂದ ರಕ್ಷಿಸಿ ಎಂದು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಬೇಕು. ಲವ್ ಜಿಹಾದ್ ವಿರುದ್ದ ಕಾನೂನನ್ನು ಬಿಜೆಪಿ ಸರ್ಕಾರ ಮಾಡುತ್ತದೆ. ಲವ್ ಜಿಹಾದ್ ಇತ್ತೀಚೆಗೆ ಕಾಡುತ್ತಿರುವ ಬಹಳ ದೊಡ್ಡ ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ನಿಮ್ಮ ಮಕ್ಕಳು ಬಲಿಯಾಗದಂತೆ ನೋಡಿಕೊಳ್ಳಿ. ಅದಕ್ಕೆ ಬಿಜೆಪಿಯನ್ನು ಗೆಲ್ಲಿಸಿ ಅಧಿಕಾರ ನೀಡಿ. ಬಿಜೆಪಿ ಅಧಿಕಾರಕ್ಕೆ ಬಂದರೆ ಯುವಕ-ಯುವತಿಯರ ರಕ್ಷಣೆಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ.

ನೀವು ರಸ್ತೆ, ಮೋರಿ ಮುಂತಾದ ಸಣ್ಣ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಬೇಡಿ, ಲವ್ ಜಿಹಾದ್’ನಿಂದ ನಿಮ್ಮ ಮಕ್ಕಳನ್ನು ರಕ್ಷಿಸುವ ಬಗ್ಗೆ ಮಾತನಾಡಿ ಎಂದು ಸಲಹೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಂಸದರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಲವರು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರೆ, ಮತ್ತೆ ಕೆಲವರು ಸಂಸದರ ಹೇಳಿಕೆಯನ್ನು ಟೀಕಿಸಿದ್ದಾರೆ.

Join Whatsapp