Home ಜಾಲತಾಣದಿಂದ ಉತ್ತರಪ್ರದೇಶ: ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ ಕೊಂದು ಹಾಕಿದ ಬೀದಿ...

ಉತ್ತರಪ್ರದೇಶ: ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ ಕೊಂದು ಹಾಕಿದ ಬೀದಿ ನಾಯಿಗಳು

ಅಲಿಗಢ: ಬೀದಿ ನಾಯಿಗಳ ಗುಂಪೊಂದು 65 ವರ್ಷದ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ ಕೊಂದು ಹಾಕಿದ ಘಟನೆ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ (ಎಎಂಯು) ಆವರಣದಲ್ಲಿ ನಡೆದಿದೆ.

ಬೀದಿ ನಾಯಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ತೀವ್ರ ರಕ್ತ ಸ್ರಾವವಾಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹಲವಾರು ನಾಯಿಗಳು ವ್ಯಕ್ತಿಯನ್ನು ಸುತ್ತುವರಿದು ದಾಳಿ ಮಾಡುತ್ತಿರುವುದು ವೀಡಿಯೋದಲ್ಲಿ ಇದೆ.

ತಕ್ಷಣವೇ ಸ್ಥಳಕ್ಕೆ ಧಾವಿಸಿ ಬಂದ ಸ್ಥಳೀಯ ಪೊಲೀಸರು ವೈದ್ಯಕೀಯ ಚಿಕಿತ್ಸೆಗಾಗಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅತಿಯಾದ ರಕ್ತ ಸೋರಿಕೆಯಿಂದಾಗಿ ಮಾರ್ಗಮಧ್ಯೆ ಗಾಯಾಳು ಸಾವನ್ನಪ್ಪಿದ್ದಾರೆ.

Join Whatsapp
Exit mobile version