SSLC ಪರೀಕ್ಷಾ ಮೌಲ್ಯಮಾಪನದಲ್ಲಿ ಲೋಪವೆಸಗಿದ 4,317 ಶಿಕ್ಷಕರ ವಿರುದ್ಧ ಕಠಿಣ ಕ್ರಮ: ಸಚಿವ ಬಿ.ಸಿ.ನಾಗೇಶ್

Prasthutha|

ಬೆಂಗಳೂರು; ರಾಜ್ಯದಲ್ಲಿ ಎಸ್ ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಸಮರ್ಪಕವಾಗಿ ಮೌಲ್ಯಮಾಪನ ಮಾಡದೇ ಕರ್ತವ್ಯ ಲೋಪ ಎಸಗಿದ 4 ಸಾವಿರದ 317 ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಪರಿಷತ್ತಿನಲ್ಲಿಂದು ತಿಳಿಸಿದರು.

- Advertisement -


ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವರು, ಆರರಿಂದ 10 ಅಂಕ ವ್ಯತ್ಯಾಸ ಮಾಡಿದ ಶಿಕ್ಷಕರಿಗೆ ಎಚ್ಚರಿಕೆ ನೀಡಲಾಗುವುದು, 11ರಿಂದ 15 ಮತ್ತು 15ರಿಂದ 20 ಅಂಕ ವ್ಯತ್ಯಾಸ ಮಾಡಿದ ಶಿಕ್ಷಕರನ್ನು ಎರಡು ಪರೀಕ್ಷೆಗಳ ಕರ್ತವ್ಯದಿಂದ ಅಮಾನತುಗೊಳಿಸಲಾಗುವುದು ಎಂದರು.


20ಕ್ಕಿಂತ ಹೆಚ್ಚು ಅಂಕ ವ್ಯತ್ಯಾಸ ಮಾಡಿದ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಜರುಗಿರುವ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುತ್ತಿದೆ ಎಂದರು. ಮರುಮೌಲ್ಯಮಾಪನದಲ್ಲಿ ಆರಕ್ಕಿಂತ ಕಡಿಮೆ ಅಂಕ ವ್ಯತ್ಯಾಸವಾಗಿರುವ 15 ಸಾವಿರದ 591 ಪ್ರಕರಣಗಳಿವೆ. ಆರಕ್ಕಿಂತ ಹೆಚ್ಚು ಅಂಕ ವ್ಯತ್ಯಾಸವಾಗಿರುವ 4 ಸಾವಿರದ 235 ಪ್ರಕರಣಗಳಿವೆ, ಆರಕ್ಕಿಂತ ಹೆಚ್ಚು ಅಂಕ ವ್ಯತ್ಯಾಸ ಕಂಡು ಬಂದ ಪ್ರಕರಣಗಳಲ್ಲಿ ವಿದ್ಯಾರ್ಥಿಗಳು ಪಾವತಿಸಿದ 805 ರೂಪಾಯಿ ಶುಲ್ಕವನ್ನು ಮರು ಪಾವತಿಸಲಾಗಿದೆ ಎಂದು ಸಚಿವರು ತಿಳಿಸಿದರು.



Join Whatsapp