Home ಟಾಪ್ ಸುದ್ದಿಗಳು ‘ಗೃಹಲಕ್ಷ್ಮೀ’ ನೋಂದಣಿ ತಾತ್ಕಾಲಿಕ ಸ್ಥಗಿತ ಟ್ವೀಟ್ | ತಪ್ಪು ಮಾಹಿತಿ ನೀಡಿದ ಇಲಾಖೆಯ ಸಿಬ್ಬಂದಿ ವಿರುದ್ಧ...

‘ಗೃಹಲಕ್ಷ್ಮೀ’ ನೋಂದಣಿ ತಾತ್ಕಾಲಿಕ ಸ್ಥಗಿತ ಟ್ವೀಟ್ | ತಪ್ಪು ಮಾಹಿತಿ ನೀಡಿದ ಇಲಾಖೆಯ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ‘ಗೃಹಲಕ್ಷ್ಮೀ’ ನೋಂದಣಿ ಸ್ಥಗಿತ ಆಗಿದೆ ಎಂದು ಕೇಳಿ ನನಗೆ ಆಶ್ಚರ್ಯ ಆಯಿತು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಕ್ಷಣ ಇಲಾಖೆ ಕಾರ್ಯದರ್ಶಿ, ನಿರ್ದೇಶಕರ ಕರೆದು ಮಾತನಾಡಿದೆ. ಅತಾಚುರ್ಯದಿಂದ ನಮ್ಮ ಇಲಾಖೆಯಿಂದ ಈ ಟ್ವೀಟ್ ಆಗಿದೆ. ಏಕೆ ಆ ರೀತಿ ಆಯಿತು ಗೊತ್ತಾಗುತ್ತಿಲ್ಲ. ಟ್ವೀಟ್ ಸಂಬಂಧ ಎಲ್ಲರಿಗೂ ನೋಟಿಸ್ ಜಾರಿ ಮಾಡಿದ್ದೇವೆ. ಈ ವಿಚಾರವನ್ನು ಬಹಳ ಸೀರಿಯಸ್ ಆಗಿ ತೆಗೆದುಕೊಂಡಿದ್ದೇವೆ. ಸಾಮಾಜಿಕ ಜಾಲತಾಣ ನಿರ್ವಹಿಸುವವರ ವಿರುದ್ಧ ಕ್ರಮ ಆಗುತ್ತೆ ಎಂದು ಹೇಳಿದ್ದಾರೆ.


ನಮ್ಮ ಇಲಾಖೆಯಿಂದ ಈಗಾಗಲೇ ಹಣ ವರ್ಗಾವಣೆ ಆಗಿದೆ. ಬ್ಯಾಂಕ್ ನಿಂದ ಮಾತ್ರ ಹಣ ಸ್ಲೋ ಆಗಿದೆ. ಇನ್ನು ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗುತ್ತೆ. ನಿಧಾನವಾಗಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆಗುತ್ತಿದೆ. ಫಲಾನುಭವಿಗಳಿಗೆ ನಮ್ಮ ಇಲಾಖೆಯಿಂದ ಹಣ ಕಳುಹಿಸುತ್ತಿದ್ದೇವೆ. ಹೊಸದಾಗಿ ನೋಂದಣಿ ಮಾಡಿಕೊಂಡವರಿಗೂ ಲಾಭ ಸಿಗುತ್ತಿದೆ. ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆ ಎಂದು ತಿಳಿಸಿದರು.

Join Whatsapp
Exit mobile version