ಜುಲೈ 26ರಂದು ಕೋರ್ಟ್’ಗೆ ಹಾಜರಾಗದಿದ್ದರೆ ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮ

Prasthutha|

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಸುಲ್ತಾನ್ ಪುರದ ಎಂಪಿಎಂಎಲ್ ಎ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ. ಇಂದು ವಿಚಾರಣೆ ಇತ್ತು. ಸದನದ ಕಲಾಪ ನಡೆಯುತ್ತಿರುವುದರಿಂದ ರಾಹುಲ್ ಗಾಂಧಿ ಅವರು ನ್ಯಾಯಾಲಯಕ್ಕೆ ಬರಲು ಅಸಮರ್ಥರಾಗಿದ್ದಾರೆ ಎಂದು ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಪರ ವಕೀಲರು ತಿಳಿಸಿದ್ದಾರೆ. ನ್ಯಾಯಾಲಯವು ಜುಲೈ 26ರಂದು ರಾಹುಲ್ ಗಾಂಧಿ ಕೋರ್ಟ್ ಗೆ ಹಾಜರಾಗದಿದ್ದರೆ ನ್ಯಾಯಾಲಯವು ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

- Advertisement -


ಆಗಸ್ಟ್ 4, 2018 ರಂದು, ಜಿಲ್ಲಾ ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷ ವಿಜಯ್ ಮಿಶ್ರಾ ಅವರು ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

Join Whatsapp