Home ಟಾಪ್ ಸುದ್ದಿಗಳು ಪೊಲೀಸರ ನಿರ್ಲಕ್ಷ್ಯದಿಂದ ಆರ್ ಡಿ ಪಾಟೀಲ್ ತಪ್ಪಿಸಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಪರಮೇಶ್ವರ್

ಪೊಲೀಸರ ನಿರ್ಲಕ್ಷ್ಯದಿಂದ ಆರ್ ಡಿ ಪಾಟೀಲ್ ತಪ್ಪಿಸಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಪರಮೇಶ್ವರ್

ಬೆಂಗಳೂರು: ಕಲಬುರಗಿಯಲ್ಲಿ ನಡೆದ ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್ಪಿನ್ ಆರ್ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ ಎಂದಿದ್ದಾರೆ. ಅಲ್ಲದೆ, ಪೊಲೀಸರ ನಿರ್ಲಕ್ಷ್ಯದಿಂದ ತಪ್ಪಿಸಿಕೊಂಡಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್.ಡಿ.ಪಾಟೀಲ್ ಮೇಲೆ ಸಾಕಷ್ಟು ಕೇಸ್ಗಳಿವೆ. ಅಗತ್ಯವಿದ್ದರೆ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತೇವೆ. ಮರು ಪರೀಕ್ಷೆ ನಡೆಸುವ ಕುರಿತು ಕೆಇಎ ತೀರ್ಮಾನ ಮಾಡುತ್ತದೆ. ನಮಗೆ ದೂರು ಕೊಟ್ಟ ಹಿನ್ನೆಲೆ ತನಿಖೆ ಮಾಡುತ್ತಿದ್ದೇವೆ. ಕಿಂಗ್ಪಿನ್ ಗಳಿಗೆ ಭಯ ಇಲ್ಲದಿರುವುದಕ್ಕೆ ಈ ರೀತಿ ಮಾಡಿದ್ದಾರೆ. ಇನ್ನು ಮುಂದೆ ಹೀಗೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.


ತನ್ನ ಮನೆಗೆ ಪೊಲೀಸರು ಎಂಟ್ರಿ ಕೊಡುತ್ತಿದ್ದಂತೆ ಕಿಂಗ್ಪಿನ್ ಆರ್ಡಿ ಪಾಟೀಲ್ ಕಂಪೌಂಡ್ ಹಾರಿ ಎಸ್ಕೇಪ್ ಆಗಿದ್ದಾನೆ. ಈ ರೀತಿ ಮಾಡುವುದು ಈತ ಮೊದಲೇನಲ್ಲ. ಪೊಲೀಸರು ಬಂದಾಗ ಕಂಪೌಂಡ್ ಹಾರೋ ಚಟ ಮಾಡಿಕೊಂಡಿರೋ ಆರ್ ಡಿ ಪಾಟೀಲ್, ಈ ಹಿಂದೆ ಪಿಎಸ್ ಐ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ಪೊಲೀಸರು ಬಂಧನ ಮಾಡಲು ಹೋದಾಗ ಇದೇ ರೀತಿ ಕಂಪೌಂಡ್ ಹಾರಿ ತಪ್ಪಿಸಿಕೊಂಡು ಹೋಗಿದ್ದ ಎಂದು ಹೇಳಿದ್ದಾರೆ.

Join Whatsapp
Exit mobile version