Home ಟಾಪ್ ಸುದ್ದಿಗಳು ಔಷಧಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಿನ ತಪಾಸಣೆ ನಡೆಸಿ: ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ

ಔಷಧಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಿನ ತಪಾಸಣೆ ನಡೆಸಿ: ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆಯಾಗುವ ಔಷಧಗಳು ಸೇರಿದಂತೆ ಸರ್ಕಾರಿ ಔಷಧಾಲಯಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಮಾರುಕಟ್ಟೆಗೆ ಪೂರೈಕೆಯಾಗುವ ಔಷಧಗಳ ಗುಣಮಟ್ಟದ ಮೇಲೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಸೂಚನೆ ನೀಡಿದರು.


ವಿಕಾಸಸೌಧದಲ್ಲಿ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಔಷಧಿಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.


ರಾಜ್ಯದ ಮಾರುಕಟ್ಟೆಯಲ್ಲಿ ಸಾಕಷ್ಟು ಕಳಪೆ ಗುಣಮಟ್ಟದ ಔಷಧಿಗಳು ಪೂರೈಕೆ ಆಗುತ್ತಿದೆ. ಯಾರ ಹಂಗು ಇಲ್ಲದೇ ಮನಬಂದಂತೆ ಔಷಧಿಗಳನ್ನು ಜನರ ಮನೆಗೆ ಪೂರೈಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ. ಔಷಧ ನಿಯಂತ್ರಣ ಇಲಾಖೆಯ ಮುಖ್ಯ ಉದ್ದೇಶವೇ ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ಇರಿಸುವುದು. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಔಷಧಿಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು. ಆದರೆ, ಆ ರೀತಿಯ ಕಾರ್ಯವೈಖರಿ ಇಲಾಖೆಯ ಅಧಿಕಾರಿಗಳಿಂದ ಕಂಡುಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Join Whatsapp
Exit mobile version