ಕಟ್ಟುನಿಟ್ಟಿನ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ: ಸಚಿವ ಪ್ರಭು ಚೌಹಾಣ್‌

Prasthutha|

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದೇವೆ. ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ನಂತರ ಕಸಾಯಿಖಾನೆಗೆ ಹೋಗುವ ಗೋವುಗಳ ಸಂಖ್ಯೆ ಕಡಿಮೆಯಾಗಿದೆ. ಗೋ ಸಂತತಿ ಉಳಿವಿಗಾಗಿ ಗೋ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್‌ ತಿಳಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಡಿಸೆಂಬರ್‌ ವೇಳೆಗೆ 30 ಗೋ ಶಾಲೆಗಳು ಪ್ರಾರಂಭವಾಗಲಿವೆ. ಈಗಾಗಲೇ 12 ಗೋಶಾಲೆ ಸಿದ್ಧವಾಗಿದೆ ಎಂದು ತಿಳಿಸಿದರು.

ಗೋಹತ್ಯೆ ನಿಷೇಧದಿಂದ ಚರ್ಮ ಉದ್ಯಮಕ್ಕೆ ತೊಂದರೆಯಾಗಿದೆ ಎಂಬುದು ಸುಳ್ಳು. ಚರ್ಮ ಉದ್ಯಮ ಕರ್ನಾಟಕವನ್ನಷ್ಟೇ ನೆಚ್ಚಿಕೊಂಡಿಲ್ಲ ಎಂದು ಹೇಳಿದರು.

- Advertisement -

ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ಮುಂದೆ ಗೋವು ಕಡಿದು ಸೇವನೆ ಮಾಡಿದರೂ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು. ಅವರು ಅಧಿಕಾರಕ್ಕೆ ಬಂದರೆ ಗೊ ಹತ್ಯೆ ನಿಷೇಧ ಕಾಯ್ದೆ ವಾಪಸ್‌ ಪಡೆಯುತ್ತೇವೆ ಅಂತಾರೆ, ಬಂದು ಪಡೆಯಲಿ ನೋಡೋಣ ಎಂದು ಚೌಹಾಣ್ ಸವಾಲು ಹಾಕಿದರು.

Join Whatsapp