ಕಡ್ಡಾಯವಾಗಿ ಶಾಲಾ ಕಾಲೇಜುಗಳಲ್ಲಿ ಗಣಪತಿ ಕೂರಿಸುವಂತಿಲ್ಲ | ಸಚಿವ ಆರ್. ಅಶೋಕ್

Prasthutha|

ಬೆಂಗಳೂರು : ರಾಜ್ಯ ಸರಕಾರವು ಕೊನೆಗೂ ಐದು ದಿನಗಳ ಕಾಲ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ಶಾಲಾ ಕಾಲೇಜುಗಳಲ್ಲಿ ಗಣಪತಿ ಕೂರಿಸುವಂತಿಲ್ಲ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಗರಗಳಲ್ಲಿ ವಾರ್ಡಿಗೊಂದು ಗ್ರಾಮಾಂತರ ಪ್ರದೇಶಗಳಲ್ಲಿ ಹಳ್ಳಿಗೊಂದು ಗಣಪ ಕೂರಿಸಬಹುದು.ಆದರೆ ಶಾಲಾ ಕಾಲೇಜುಗಳಲ್ಲಿ ಗಣಪತಿ ಕೂರಿಸುವಂತಿಲ್ಲ” ಎಂದಿದ್ದಾರೆ.

- Advertisement -

ಇನ್ನು ಕೇರಳದ ಗಡಿ ಪ್ರದೇಶದಲ್ಲಿ ಗಣೇಶೋತ್ಸವಕ್ಕೆ ನಿರ್ಬಂಧ ಹೇರಲಾಗಿದ್ದು, ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸೂಚನೆ ನೀಡಲಾಗಿದ್ದು, ಅನುಮತಿ ಪಡೆದ ಸ್ಥಳಗಳಲ್ಲಿ ಮಾತ್ರ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಲಾಗಿದ್ದು ಕಡ್ಡಾಯವಾಗಿ ಮೆರವಣಿಗೆ ನಡೆಸುವಂತಿಲ್ಲ” ಎಂದು ತಿಳಿಸಿದ್ದಾರೆ.

ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮ, ಡಿ.ಜೆ ನಡೆಸುವಂತಿಲ್ಲ. ಐವತ್ತು ಅಡಿ ವ್ಯಾಪ್ತಿಯ ಪೆಂಡಾಲ್ ಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಷರತ್ತು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಇನ್ನು ಮುಖ್ಯವಾಗಿ ರಾತ್ರಿ ಒಂಭತ್ತು ಗಂಟೆಯ ನಂತರ ಯಾವುದೇ ಪೂಜೆ ಪುರಸ್ಕಾರಕ್ಕೆ ಅನುಮತಿ ಇಲ್ಲ. ಗಣೇಶೋತ್ಸವ ಸಂಘಟಕರು ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆದಿರಬೇಕು ಎಂದು ಹೇಳಿದ್ದಾರೆ

Join Whatsapp