ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರವನ್ನು ಒಂದು ದಿನ ಬಂದ್ ಮಾಡಲು MES(ಮಹಾರಾಷ್ಟ್ರ ಏಕೀಕರಣ ಸಮಿತಿ) ನಿರ್ಣಯ ಕೈಗೊಂಡಿದೆ.
‘ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಇದನ್ನು ಖಂಡಿಸಲು ಒಂದು ದಿನ ಮಹಾರಾಷ್ಟ್ರ ಬಂದ್ ಮಾಡಬೇಕು. ಇದಕ್ಕೆ ಎಲ್ಲ ಪಕ್ಷಗಳೂ ಬೆಂಬಲ ಕೊಡಬೇಕು’ ಎಂಬ ನಿರ್ಣಯವನ್ನು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೋಮವಾರ ನಡೆದ ಬೃಹತ್ ಸಮಾವೇಶದಲ್ಲಿ MES ಕೈಗೊಂಡಿದೆ.
‘ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ, ಕಾರವಾರ್ ಸಂಯುಕ್ತ ಮಹಾರಾಷ್ಟ್ರ ಆಗಲೇಬೇಕು’, ‘ರಹೇಂಗೆ ತೋ ಮಹಾರಾಷ್ಟ್ರ ಮೇ ನಹಿ ತೋ ಜೈಲ್ ಮೇ (ಇದ್ದರೆ ಮಹಾರಾಷ್ಟ್ರದಲ್ಲಿ, ಇಲ್ಲದಿದ್ದರೆ ಜೈಲಿನಲ್ಲಿ)’ ಎಂದು MES ಕಾರ್ಯಕರ್ತರು ಸಮಾವೇಶದಲ್ಲಿ ಘೋಷಣೆ ಮೊಳಗಿಸಿದ್ದಾರೆ.