ಕಾಲೇಜಿನಿಂದ ವಿದ್ಯಾರ್ಥಿನಿ ಅಪಹರಿಸಿ ಗ್ಯಾಂಗ್ ರೇಪ್

Prasthutha|

ಬಳ್ಳಾರಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

- Advertisement -


ಈ ಸಂಬಂಧ ಬಳ್ಳಾರಿ ಮಹಿಳಾ ಠಾಣೆಯಲ್ಲಿ ನಾಲ್ವರ ವಿರುದ್ಧ ಸಂತ್ರಸ್ತ ಯುವತಿಯ ತಂದೆ ದೂರು ದಾಖಲಿಸಿದ್ದಾರೆ. ಬಳ್ಳಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಮುಖ ಆರೋಪಿ ನವೀನ್ ಎಂಬಾತನನ್ನು ಬಂಧಿಸಿ, ಉಳಿದವರಿಗಾಗಿ ಬಲೆ ಬೀಸಿದ್ದಾರೆ.


ಸಂತ್ರಸ್ತ ಯುವತಿ ಬಳ್ಳಾರಿ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಅಕ್ಟೋಬರ್ 11 ರಂದು ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ನಿಮ್ಮ ಅಣ್ಣ ಬಂದಿದ್ದಾನೆ ಎಂದು ಸುಳ್ಳು ಹೇಳಿ ಪರೀಕ್ಷಾ ಕೊಠಡಿಯಿಂದ ಯುವತಿಯನ್ನು ಹೊರಗೆ ಕರೆಯಿಸಿ ಬಳಿಕ ಆಟೋದಲ್ಲಿ ನಾಲ್ವರು ಯುವಕರು ಅಪಹರಿಸಿದ್ದರು. ನಂತರ ಆಟೋದಲ್ಲೇ ಯುವತಿಗೆ ಮದ್ಯ ಕುಡಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಣಾಪುರ ಬಳಿಯ ಹೋಟೆಲ್ವೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಾಗಿದೆ.