ಹೈದರಾಬಾದ್ ಹಾಸ್ಟೆಲ್’ನಲ್ಲಿ ವಿದ್ಯಾರ್ಥಿಗೆ ಹಲ್ಲೆ: 8 ಮಂದಿಯ ಬಂಧನ

Prasthutha|

ಹೈದರಾಬಾದ್: ಹೈದರಾಬಾದ್ ಬಳಿಯ ಹಾಸ್ಟೆಲ್’ವೊಂದರಲ್ಲಿ ಗುಂಪೊಂದು ಕಾನೂನು ವಿಭಾಗದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ, ಧಾರ್ಮಿಕ ಘೋಷಣೆ ಕೂಗುವಂತೆ ಬಲವಂತಪಡಿಸಿದ ಘಟನೆಗೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಹೈದರಾಬಾದ್’ನ ಐಸಿಎಫ್ಎಐ ಫೌಂಡೇಶನ್ ಫಾರ್ ಹೈಯರ್ ಎಜ್ಯುಕೇಶನ್ ಸಂಸ್ಥೆಯಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಹಿಮಾಂಕ್ ಬನ್ಸಾಲ್ ಎಂಬಾತನಿಗೆ ಕಪಾಳಮೋಕ್ಷ, ಕೈಗಳನ್ನು ತಿರುಚಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿಯ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ 12 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಆ ಪೈಕಿ 8 ಮಂದಿಯನ್ನು ಬಂಧಿಸಲಾಗಿದೆ. ಇನ್ನುಳಿದ ಏಳು ಮಂದಿ ಆರೋಪಿಗಳು ಪರಾರಿಯಾಗಿದ್ದಾರೆ. ಸದ್ಯ ಆರೋಪಿಗಳೆಲ್ಲರನ್ನೂ ಶಿಕ್ಷಣ ಸಂಸ್ಥೆ ಅಮಾನತುಗೊಳಿಸಿದೆ.

Join Whatsapp