ಕಲಬುರಗಿ: ಪಬ್ಜಿ ಗೇಮ್ ನಲ್ಲಿ ಹಣ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಪ್ರವೀಣ್ ಪಾಟೀಲ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಕಲಬುರಗಿ ನಗರದ ದೇವಿ ನಗರ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರವೀಣ್ ನೇಣಿಗೆ ಶರಣಾಗಿದ್ದಾನೆ. ಈತ ಕಲಬುರಗಿ ನಗರದ ಖಾಸಗಿ ಕಾಲೇಜ್ನಲ್ಲಿ ಬಿಇ (BE) ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಪ್ರವೀಣ್ ಪಬ್ಜಿ ಗೇಮ್ ನಿಂದ ಸಾಲ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಈ ಕುರಿತು ಆರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.