Home ಕರಾವಳಿ ನೀಟ್ ಫಲಿತಾಂಶದಿಂದ ನೊಂದ ವಿದ್ಯಾರ್ಥಿ ಆತ್ಮಹತ್ಯೆ; ಗೊಂದಲಮಯ ನೀಟ್ ರದ್ದುಗೊಳಿಸಲು ಕ್ಯಾಂಪಸ್ ಫ್ರಂಟ್ ಆಗ್ರಹ

ನೀಟ್ ಫಲಿತಾಂಶದಿಂದ ನೊಂದ ವಿದ್ಯಾರ್ಥಿ ಆತ್ಮಹತ್ಯೆ; ಗೊಂದಲಮಯ ನೀಟ್ ರದ್ದುಗೊಳಿಸಲು ಕ್ಯಾಂಪಸ್ ಫ್ರಂಟ್ ಆಗ್ರಹ

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಪಡೆದ ಕಾರಣಕ್ಕಾಗಿ ಮನನೊಂದು ಕುಂದಾಪುರ ತಾಲೂಕಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೈದಿದ್ದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ.

ಸಾಯಿಷ್ ಶೆಟ್ಟಿ ಮೃತ ವಿದ್ಯಾರ್ಥಿ. ನೀಟ್ ಪರೀಕ್ಷೆಯ ಪರಿಣಾಮವಾಗಿ ಹಲವಾರು ವಿದ್ಯಾರ್ಥಿಗಳು ತಮ್ಮ ಜೀವವನ್ನು ಕಳೆದಿದ್ದು, ಇತ್ತೀಚಿನ ದಿನಗಳಲ್ಲಿ  ನೀಟ್ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುತ್ತಿದೆ. ಇದರ ಲೋಪ ದೋಷ ಗಳನ್ನು ಅರಿತು ತಮಿಳುನಾಡು ಸರ್ಕಾರ ನಿರ್ಣಯವನ್ನು ಸಹ ಮಂಡಿಸಿತ್ತು.

 ಸಿಇಟಿ  ಸೀಟ್ ಹಂಚಿಕೆಯ ವಿಚಾರದಲ್ಲೂ ಬದಲಾವಣೆ ತರಲು ಈಗಾಗಲೇ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಈ ನೀಟ್ ಎಂಬ ಅರ್ಹತಾ ಪರೀಕ್ಷೆಯಿಂದ ತುಳಿತಕ್ಕೊಳಗಾದ ಸಮುದಾಯಗಳಿಗೆ ದೊಡ್ಡ ಪ್ರಮಾಣದ ನಷ್ಟವುಂಟಾಗುತ್ತಿದೆ ಎಂದು  ಪರೀಕ್ಷೆಯ ಮೂಲಕ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳ ಅಂಕಿ ಅಂಶಗಳೇ ಸಾರಿ ಹೇಳುತ್ತವೆ.

ಇದೆಲ್ಲವನ್ನು ಗಮನಿಸುವಾಗ ಹಲವು ರೀತಿಯ ಗೊಂದಲಗಳಿಂದ ಕೂಡಿರುವ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಬೇಕು ಹಾಗೂ ವಿದ್ಯಾರ್ಥಿ ಸಾಯಿಷ್ ಶೆಟ್ಟಿ ಕುಟುಂಬಕ್ಕೆ ಪರಿಹಾರ ಒದಗಿಸಬೇಕೆಂದು ಕ್ಯಾಂಪಸ್ ಫ್ರಂಟ್ ಕುಂದಾಪುರ ಅಧ್ಯಕ್ಷರಾದ ಮುಜಾಹಿದ್ ಆಗ್ರಹಿಸಿದ್ದಾರೆ.

Join Whatsapp
Exit mobile version