ಮಡಿಕೇರಿ: ಪಿ.ಯು.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಹಿನ್ನೆಲೆಯಲ್ಲಿ ಮನ ನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಶಾಲನಗರ ಸಮೀಪ ಬಸವನ ಹಳ್ಳಿಯಲ್ಲಿ ನಡೆದಿದೆ.
ಬಸವನಹಳ್ಳಿಯ ಹೆರೂರು ನಿವಾಸಿ ನಿವೃತ ಯೋಧ ಶುಭಾಷ್ ಅವರ ಪುತ್ರಿ ಸಂದ್ಯಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಇಂದು ಪ್ರಕಟವಾದ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಳು ಎನ್ನಲಾಗಿದೆ.
ಕುಶಾಲನಗರ ವಿವೇಕಾನಂದ ಕಾಲೇಜಿನಲ್ಲಿ ಸಂದ್ಯಾ ದ್ವಿತೀಯ ಪಿಯುಸಿ ಓದುತ್ತಿದ್ದಳು. ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ, ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.