ಪಂಜಾಬ್ ನ ಖಾಸಗಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

Prasthutha|

ಚಂಢೀಗಡ: ಪಂಜಾಬ್ ನ ಮೊಹಾಲಿಯ ಖಾಸಗಿ ವಿಶ್ವವಿದ್ಯಾಲಯದ ವೀಡಿಯೊ ಸೋರಿಕೆಯ ಪ್ರಕರಣದ ಬೆನ್ನಲ್ಲೇ ಜಲಂಧರ್ ನ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.

- Advertisement -

ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಬಿ ಡಿಸೈನ್ ನ ಮೊದಲ ವರ್ಷದ ವಿದ್ಯಾರ್ಥಿಯೊಬ್ಬ ಸೆಪ್ಟೆಂಬರ್ 20 ರಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯ ನಂತರ, ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸಿದರು

ಪೊಲೀಸರು ಸ್ಥಳದಿಂದ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದು,  ವೈಯಕ್ತಿಕ ಕಾರಣದಿಂದಾಗಿ ಈ ಕೃತ್ಯವನ್ನು ಮಾಡಿರುವುದಾಗಿ ಪತ್ರದಲ್ಲಿ ಬರೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಕ್ಯಾಂಪಸ್ ನಲ್ಲಿ ಭಾರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

- Advertisement -

ಮಾಹಿತಿ ಸಿಕ್ಕಿದ ಕೂಡಲೇ ಸಿವಿಲ್ ಮತ್ತು ಪೊಲೀಸ್ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ.



Join Whatsapp