ಕೊಲೆ ಬೆದರಿಕೆ ಆರೋಪ: ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಹಾಸನ: ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಹೆದರಿಸಿದ್ದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೆಳ್ಳೊಟ್ಟೆ ಗ್ರಾಮದಲ್ಲಿ ನಡೆದಿದೆ.

- Advertisement -


ಆಶಾ (20) ಮೃತ ಯುವತಿ. ಬೇಲೂರು ಪಟ್ಟಣದ ಕಾಲೇಜುವೊಂದರಲ್ಲಿ ದ್ವಿತೀಯ ಬಿಕಾಂ ಓದುತ್ತಿದ್ದ ಆಶಾಳನ್ನು ಅದೇ ಕಾಲೇಜಿನಲ್ಲಿ ದ್ವಿತೀಯ ಬಿಎ ಓದುತ್ತಿದ್ದ ಆಲೂರು ತಾಲೂಕು ಕಾಟೀಹಳ್ಳಿ ಗ್ರಾಮದ ಮಂಜುನಾಥ ಎಂಬಾತ ಪ್ರೀತಿಸುತ್ತಿದ್ದ. ಇತ್ತೀಚೆಗೆ ಇದೇ ಮಂಜುನಾಥ ಬೇರೊಂದು ಹುಡುಗಿ ಜೊತೆ ಸುತ್ತಾಡುತ್ತಿದ್ದ. ಇದನ್ನು ಗಮನಿಸಿದ ಆಶಾ ಮಂಜುನಾಥನನ್ನು ಹೀಗೇಕೆ ಮಾಡುತ್ತಿದ್ದೀಯಾ ಎಂದು ಪ್ರಶ್ನೆ ಮಾಡಿದ್ದಳು. ನೀನು ನನ್ನನ್ನು ಹೀಗೆಲ್ಲಾ ಪ್ರಶ್ನೆ ಮಾಡಬೇಡ. ಪ್ರಶ್ನಿಸಿದರೆ ಕೊಲೆ ಮಾಡುತ್ತೇನೆ. ಅಷ್ಟೇ ಅಲ್ಲ, ನೀನು ನನ್ನೊಂದಿಗೆ ಸುತ್ತಾಡಿರುವ ಫೋಟೋ, ಮೆಸೇಜ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿ, ನಿಂದಿಸಿದ್ದ ಎಂದ ಆರೋಪಿಸಲಾಗಿದೆ.