ಕೊಡಗು: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚೌಡ್ಲು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಡಿಕೇರಿ ಪುಟಾಣಿ ನಗರದ ನಿವಾಸಿ ಕುಮಾರೇಶ್ ಎಂಬವರ ಪುತ್ರಿ 17ವರ್ಷದ ಕೀರ್ತನ ಎಂದು ಗುರುತಿಸಲಾಗಿದೆ.
ಮಡಿಕೇರಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಕೀರ್ತನ, ಶುಕ್ರವಾರ ಬೆಳಿಗ್ಗೆ ಗಾಂಧಿನಗರದಲ್ಲಿರುವ ತನ್ನ ಅಜ್ಜಿಯ ಮನೆಗೆ ತೆರಳುವ ಮಾರ್ಗ ಮಧ್ಯೆ ಚೌಡ್ಲು ಗ್ರಾಮದ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಆಗಮಿಸಿದ ಸೋಮವಾರಪೇಟೆ ಪೊಲೀಸರು ಮೃತದೇಹವನ್ನು ಕೆರೆಯಿಂದ ಮೇಲೆತ್ತಿ ತನಿಖೆ ಕೈಗೊಂಡಿದ್ದಾರೆ.