ಚಿಕ್ಕಬಳ್ಳಾಪುರ: ಇನ್ ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಜತೆ ಪ್ರೀತಿಗೆ ಬಿದ್ದು, ಪ್ರೇಮ ವೈಫಲ್ಯ ಆಗಿದೆ ಎಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಪವಿತ್ರಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕುರಬೂರು ಸರ್ಕಾರಿ ಕೃಷಿ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಅಗ್ರೀಕಲ್ಚರ್ ಓದುತ್ತಿದ್ದ ಪವಿತ್ರಾ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಪ್ರೀತಿಗೆ ಬಿದ್ದು ಕಾಲೇಜಿನ ಹಾಸ್ಟೇಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಇನ್ಟಾಗ್ರಾಂ ನಲ್ಲಿ ಪರಿಚಯವಾದ ಹುಡಗನ ಜೊತೆ ಲವ್ ಮಾಡಿದ್ದು, ಈಗ ಲವ್ ಫೇಲ್ಯೂರ್ ಆಗಿದೆ. ಈ ಹಿನ್ನೆಲೆಯಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿದ್ದಾಳೆ
ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ