Home ಟಾಪ್ ಸುದ್ದಿಗಳು ಕೆಎಸ್ಆರ್​ಟಿಸಿ ಬಸ್​ಗೆ ಬೈಕ್ ಡಿಕ್ಕಿ: ವಿದ್ಯಾರ್ಥಿ ಮೃತ್ಯು

ಕೆಎಸ್ಆರ್​ಟಿಸಿ ಬಸ್​ಗೆ ಬೈಕ್ ಡಿಕ್ಕಿ: ವಿದ್ಯಾರ್ಥಿ ಮೃತ್ಯು

ರಾಮನಗರ: ಕೆಎಸ್ಆರ್​ಟಿಸಿ ಬಸ್ ​ಗೆ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜೋಡಗಟ್ಟೆ ಗ್ರಾಮದ ಬಳಿ ನಡೆದಿದೆ.

ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಈ ವಿದ್ಯಾರ್ಥಿಗಳು ಹಾರೋಹಳ್ಳಿಯಿಂದ ಐಟಿಐ ಪರೀಕ್ಷೆ ಬರೆಯಲು ಮಾಗಡಿಗೆ ಹೋಗುತ್ತಿದ್ದರು ಎನ್ನಲಾಗಿದೆ. ರಸ್ತೆ ತಿರುವಿನಲ್ಲಿ ಈ ಅವಘಡ ನಡೆದಿದೆ. ಈ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version