Home ಟಾಪ್ ಸುದ್ದಿಗಳು ಕಾಲೇಜು ಕಾಂಪೌಂಡ್’ನಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು

ಕಾಲೇಜು ಕಾಂಪೌಂಡ್’ನಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು

ದಾವಣಗೆರೆ: ಕಾಲೇಜು ಕಾಂಪೌಂಡ್ ನಿಂದ ಜಾರಿ ಬಿದ್ದು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುರುಬರಹಳ್ಳಿ ಸಮೀಪದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜ್ ನಲ್ಲಿ ನಡೆದಿದೆ.


ಸಿನಿಕ್ಷಾ(16) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.


ಸಿನಿಕ್ಷಾ ಕಾಂಪೌಂಡ್ ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಳು. ಈ ವೇಳೆ ಬಾಲಕಿಯನ್ನ ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಆಸ್ಪತ್ರೆಯಲ್ಲೇ ಪ್ರಾಣ ಬಿಟ್ಟಿದ್ದಾಳೆ. ಮೃತ ಬಾಲಕಿ ಸಿನಿಕ್ಷಾ, ಕಳೆದ ನಾಲ್ಕು ದಿನಗಳ ಹಿಂದೆಯಷ್ಟೆ ಮಾನ್ಯತಾ ವಸತಿ ಕಾಲೇಜಿನಲ್ಲಿ ಸೈನ್ಸ್ ವಿಭಾಗದ ಪಿಯು ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿದ್ದಳು. ಸದ್ಯ ಘಟನೆ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version