ಬೈಕ್ ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

Prasthutha|

ಚಿಕ್ಕಬಳ್ಳಾಪುರ: ಸಿನಿಮೀಯ ಶೈಲಿಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವುಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ. ಇದೀಗ ಆತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಅಪ್ರೋಜ್ ಪಾಷಾ (16) ಮೃತ ವಿದ್ಯಾರ್ಥಿ.

- Advertisement -

ಮೈಲಾಂಡಹಳ್ಳಿ ಗ್ರಾಮದ 18 ವರ್ಷದ ತಾಜ್ ಉಲ್ಲಾ ಷರೀಪ್ ಹಾಗೂ ಅಪ್ರೋಜ್ ಪಾಷಾ ಅತಿವೇಗವಾಗಿ ಅಡ್ಡಾದಿಡ್ಡಿಯಾಗಿ ಅಜಾಗುರುಕತೆಯಿಂದ ಬೈಕ್ ವೀಲ್ಹಿಂಗ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಕೆ.ಎಸ್.ತಮ್ಮರೆಡ್ಡಿಯವರ ಜಮೀನನ ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದಿದ್ದರು. ಡಿಕ್ಕಿ ರಭಸಕ್ಕೆ ಬೈಕ್ ಸವಾರ ತಾಜ್ ಉಲ್ಲಾ ಷರೀಪ್ ಪ್ರಾಣಾಪಾಯದಿಂದ ಪಾರಾಗಿದ್ದನು. ಆದರೆ ಗಂಭೀರ ಗಾಯಗೊಂಡಿದ್ದ ಅಪ್ರೋಜ್ ಪಾಷಾನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಇತ್ತ, ಮಗನನ್ನು ಕಳೆದುಕೊಂಡ ಆತನ ತಂದೆ ತಾಯಿ ದುಃಖತಪ್ತರಾಗಿದ್ದಾರೆ. ಇನ್ನೊಂದೆಡೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 279, 337 ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Join Whatsapp