ವಿದ್ಯಾರ್ಥಿನಿ ಮೇಲೆ ಹರಿದ ಕ್ರೇನ್: ಸ್ಥಳದಲ್ಲೇ ಮೃತ್ಯು

Prasthutha|

ಆನೇಕಲ್: ಕ್ರೇನ್ ಹರಿದು ವಿದ್ಯಾರ್ಥಿನಿ ದಾರುಣ ಸಾವಿಗೀಡಾದ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲ ಗೇಟ್ ನ ಜೈನ್ ಶಾಲೆ ಬಳಿ ನಡೆದಿದೆ.

- Advertisement -


ನೂರ್ ಫಿಝಾ (19) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.


ಶಾಲೆ ಮುಗಿಸಿಕೊಂಡು ಮಹದೇವಪುರ ಕ್ಷೇತ್ರದ ವೈಟ್ ಫೀಲ್ಡ್ – ಹೊಸಕೋಟೆ ಮಾರ್ಗವಾಗಿ ಕನ್ನಮಂಗಲ ಬಳಿ ಹೋಗುತ್ತಿದ್ದಾಗ ಕ್ರೇನ್ ಹಿಂಬದಿಯಿಂದ ಬಂದು ಗುದ್ದಿದೆ. ರಸ್ತೆಯಲ್ಲಿ ಬಿದ್ದ ವಿದ್ಯಾರ್ಥಿನಿಯ ಮೇಲೆಯೇ ಕ್ರೇನ್ ಚಲಿಸಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕ್ರೇನ್ ಮಾಲೀಕ ಪೆರಿಯಸ್ವಾಮಿ ವಿರುದ್ಧ ಯುವತಿ ತಂದೆ ರೆಹಮಾನ್ ಖಾನ್ ವೈಟ್ ಫೀಲ್ಡ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Join Whatsapp