ಸಿಎಂ ಸಿದ್ದರಾಮಯ್ಯ ಕೊರಳಿಗೆ ಉಚಿತ ಬಸ್ ಟಿಕೆಟ್‌’ಗಳ ಹಾರ ಹಾಕಿದ ವಿದ್ಯಾರ್ಥಿನಿ

Prasthutha|

►ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯ

- Advertisement -

ಹಾಸನ: ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿನಿಯೊಬ್ಬಳು ಸಿಎಂ ಕೊರಳಿಗೆ ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ಹಾಕಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾಳೆ.

ಚುನಾವಣಾ ಪ್ರಚಾರದ ಸಂಧರ್ಭದಲ್ಲಿ ಸಿಎಂ ಕಡೆಗೆ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ವ್ಯಕ್ತಪಡಿಸಿದ್ದಾಳೆ.

- Advertisement -

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ” ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು ” ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಎಂದು ಹೇಳಿದ್ದಾರೆ.

Join Whatsapp