Home ಟಾಪ್ ಸುದ್ದಿಗಳು ಮಾರಕಾಸ್ತ್ರದಿಂದ ಕೊಚ್ಚಿ ವಿದ್ಯಾರ್ಥಿಯ ಬರ್ಬರ ಹತ್ಯೆ

ಮಾರಕಾಸ್ತ್ರದಿಂದ ಕೊಚ್ಚಿ ವಿದ್ಯಾರ್ಥಿಯ ಬರ್ಬರ ಹತ್ಯೆ

ಬೆಳಗಾವಿ: ಮಾರಕಾಸ್ತ್ರದಿಂದ ಕೊಚ್ಚಿ ವಿದ್ಯಾರ್ಥಿಯೋರ್ವನನ್ನು ಬರ್ಬರ ಹತ್ಯೆಗೈದ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಬಳಿ ನಡೆದಿದೆ.


ಹತ್ತನೇ ತರಗತಿಯ ಪ್ರಜ್ವಲ್ ಶಿವಾನಂದ ಕರಿಗಾರ(16) ಕೊಲೆಯಾದ ವಿದ್ಯಾರ್ಥಿ. ಬೆಳಗಾವಿಯ ಖಾಸಗಿ ಶಾಲೆಯೊಂದರಲ್ಲಿ ಪ್ರಜ್ವಲ್ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ. ಅರೆ ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಸಿಕ್ಕಿದ್ದು, ಶಾಲಾ ಸಮವಸ್ತ್ರದಿಂದ ವಿದ್ಯಾರ್ಥಿಯ ಪತ್ತೆ ಹಚ್ಚಲಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.


ಈ ಬಗ್ಗೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version